ಬೆಂಗಳೂರಿನಲ್ಲಿಂದು ನೀರಜ್ ಚೋಪ್ರಾ ಕ್ಲಾಸಿಕ್ 2025: ಜಾವೆಲಿನ್ ಥ್ರೋ ದಿಗ್ಗಜರ ಸಾಮರ್ಥ್ಯ ಪ್ರದರ್ಶನ, ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ..!
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕ್ರೀಡಾಭಿಮಾನಿಗಳಿಗೆ ವಿಶ್ವದ ಶ್ರೇಷ್ಠ ಜಾವೆಲಿನ್ ಥ್ರೋಪಟುಗಳನ್ನು ಪ್ರಮುಖವಾಗಿ ಭಾರತದ ಚಿನ್ನದ ಹುಡುದ ನೀರಜ್ ಚೋಪ್ರಾ ಅವರು ಸ್ಪರ್ಧಿಸುವುದನ್ನು ನೇರವಾಗಿ ನೋಡುವ ಅವಕಾಶ ಶನಿವಾರ ಸಿಗಲಿದೆ.
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ನೀರಜ್ ಸೇರಿ ಭಾರತದ ಐವರು ಹಾಗೂ ಏಳು ಮಂದಿ ವಿದೇಶಿಗರು ಸೇರಿ ಒಟ್ಟು 12 ಅಫೀಟ್‌ಗಳು ಚೊಚ್ಚಲ ಆವೃತ್ತಿಯ ಎನ್ ಕ್ಲಾಸಿಕ್ ಚಾಂಪಿಯನ್ ಶಿಪ್‌ಗಾಗಿ ಸ್ಪರ್ಧೆಗಿಳಿಯಲಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಈ ಕೂಟಕ್ಕೆ ‘ಎ’ ದರ್ಜೆ ಮಾನ್ಯತೆ ನೀಡಿದ್ದು, ಇದೇ ಮೊದಲ ಬಾರಿಗೆ ಭಾರತದಲ್ಲಿ ಅಂತರಾಷ್ಟ್ರೀಯ ಜಾವೆಲಿನ್ ಕೂಟ ನಡೆಯಲಿದೆ. ಭಾರತೀಯ ಅಥ್ಲೆಟಿಕ್ಸ್‌ನಲ್ಲಿ ಇದೊಂದು ಹೊಸ ಅಧ್ಯಯ ಎನಿಸಿದೆ.
ಈ ಕೂಟದಲ್ಲಿ ಸ್ಪರ್ಧಿಸಲಿರುವ 12 ಅಥ್ಲೀಟ್’ಗಳ ಪೈಕಿ ಐವರು ಈಗಾಗಲೇ ಸೆಪ್ಟೆಂಬರ್‌ನಲ್ಲಿ ಟೋಕಿಯೋದಲ್ಲಿ ನಡೆಯಲಿರುವ ವಿಶ್ವಚಾಂಪಿಯನ್ ಶಿಪ್‌ಗೆ ಅರ್ಹತೆ ಪಡೆದಿದ್ದು, ಉಳಿದವರು 85.50 ಮೀ. ದೂರ ತಲುಪಿದರೆ ಅರ್ಹತೆ ಸಿಗಲಿದೆ.
ನೀರಜ್ ಚೋಪ್ರಾ ಈ ಕೂಟವನ್ನು ತಮ್ಮ ತವರು ಹರ್ಯಾಣದ ಪಂಚಕುಲಾದಲ್ಲಿ ನಡೆಸಲು ಇಚ್ಚಿಸಿದರು. ಆದರೆ, ಅಲ್ಲಿನ ಕ್ರೀಡಾಂಗಣದಲ್ಲಿ ಫ್ಲಡ್ ಲೈಟ್ ಸಮಸ್ಯೆಯಿಂದಾಗಿ ಕೂಟವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ಮೇ 24ರಂದು ನಿಗದಿಯಾಗಿದ್ದ ಕೂಟವು, ಭಾರತ-ಪಾಕಿಸ್ತಾನ ಯುದ್ಧ ಪರಿಸ್ಥಿತಿಯಿಂದಾಗಿ ಮುಂದೂಡಲ್ಪಟ್ಟಿತ್ತು.